ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ 79 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 1334ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು ಕೊರೊನಾದಿಂದ 59 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ. ಜಿಲ್ಲೆಯಲ್ಲಿನ ಒಟ್ಟು 1334 ಸೋಂಕಿತರಲ್ಲಿ 810 ಮಂದಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 33 ಆಗಿದೆ. ಇನ್ನು ಜಿಲ್ಲೆಯಲ್ಲಿ 491 ಸಕ್ರಿಯ ಕೇಸ್ ಗಳಿವೆ.
ಇಂದು ಪತ್ತೆಯಾದ 79 ಕೇಸ್ ಗಳಲ್ಲಿ ದಾವಣಗೆರೆಯಲ್ಲಿ ಅಧಿಕ 46, ಹರಿಹರ 22,ಜಗಳೂರು 01, ಚನ್ನಗಿರಿ 03,ಹೊನ್ನಾಳಿ 06 ಹೊರ ಜಿಲ್ಲೆ 01 ಪಾಸಿಟಿವ್ ಕೇಸ್ ಪತ್ತೆಯಾಗಿವೆ.