Connect with us

Dvgsuddi Kannada | online news portal | Kannada news online

ಹೆಚ್ಚುತ್ತಲ್ಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ ಒಂದೇ ದಿನ 1,396 ಪ್ರಕರಣ ಪತ್ತೆ

ಪ್ರಮುಖ ಸುದ್ದಿ

ಹೆಚ್ಚುತ್ತಲ್ಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ದೇಶದಲ್ಲಿ ಒಂದೇ ದಿನ 1,396 ಪ್ರಕರಣ ಪತ್ತೆ

 ನವದೆಹಲಿ: ದೇಶದಲ್ಲಿ ಒಂದೇ ದಿನ  1,396 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, 48 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 27,892ಕ್ಕೆ ಏರಿಕೆಯಾಗಿದ್ದು, ಒಟ್ಟು 872 ಸಾವು ಸಂಭವಿಸಿವೆ.  6,185 ಮಂದಿ ಗುಣಮುಖರಾಗಿದ್ದು, 20,835 ಸೋಂಕಿತರು ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.  ಈವರೆಗೆ 8,068 ಜನರಿಗೆ ಸೋಂಕು ತಗುಲಿದ್ದು, 342 ಜನ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 3,301ಸೋಂಕಿತರಿದ್ದು, 151 ಜನ ಮೃತಪಟ್ಟಿದ್ದಾರೆ.  ಮಹಾರಾಷ್ಟ್ರ,  ಗುಜರಾತ್‌ ಕೊರೊನಾ ಹಾಟ್‌ಸ್ಪಾಟ್‌ ಆಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top