ನವದೆಹಲಿ: ಜಗತ್ತಿನಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಪತ್ತೆ ಪಟ್ಟಿಯಲ್ಲಿ ರಷ್ಯಾವನ್ನು ಮೀರಿಸಿರುವ ಭಾರತ ಮೂರನೇ ಸ್ಥಾನ ಪಡೆದಿದೆ.
ನಿನ್ನೆ ( ಭಾನುವಾರ) ರಾತ್ರಿ 9 ಗಂಟೆ ಸಮಯಕ್ಕೆ ದೇಶದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 6,94,053ಕ್ಕೆ ತಲುಪಿದೆ. ರಷ್ಯಾದಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 6,80,283. ಮೊದಲ ಮತ್ತು ಎರಡನೇ ಸ್ಥಾನದಲ್ಲಿರುವ ಅಮೆರಿಕದಲ್ಲಿ 28.39 ಲಕ್ಷ ಹಾಗೂ ಬ್ರೆಜಿಲ್‌ನಲ್ಲಿ 15.77 ಲಕ್ಷ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ.
ನಿನ್ನೆ ಬೆಳಗ್ಗೆ 8.30ರ ವರೆಗಿನ 24 ತಾಸುಗಳಲ್ಲಿ ದೇಶದಲ್ಲಿ 24,850 ಪಾಸಿಟಿವ್ ಹಾಗೂ 613 ಜನ ಮೃತಪಟ್ಟಿದ್ದರು. ದೇಶದಾದ್ಯಂತ ಈವರೆಗೆ ಮೃತರ ಸಂಖ್ಯೆ 19,268ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಇದೀಗ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಹೆಚ್ಚು ಪ್ರಕರಣ ಪತ್ತೆಯಾಗಿವೆ.



