ನವದೆಹಲಿ: ದೇಶದಲ್ಲಿ ಕೊರೊನಾ ವೇರಸ್ ನಿಂತ್ರಣಕ್ಕೆ ಸಿಗುತ್ತಿಲ್ಲ. ದಿನ ದಿನಕ್ಕೂ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ದೇಶದಾದ್ಯಂತ ಒಂದೇ ದಿನ 32,695 ಮಂದಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9.68 ಲಕ್ಷ ದಾಟಿದೆ.
ಕಳೆದ 24 ಗಂಟೆಯಲ್ಲಿ ಬರೋಬ್ಬರಿ 606 ಮಂದಿ ಕೊರೊನಾಗೆ ಬಲಿ ಆಗಿದ್ದು, ಒಟ್ಟು ಮೃತರ ಸಂಖ್ಯೆ 24,915ಕ್ಕೇರಿದೆ. ಇದುವರೆಗೂ ದೇಶದಲ್ಲಿ 6 ಲಕ್ಷ ಮಂದಿ ಚೇತರಿಸಿಕೊಂಡಿದ್ದು, ಚೇತರಿಕೆ ಪ್ರಮಾಣ ಶೇಕಡಾ 63.24ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,31,146 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 6,12,815 ಮಂದಿ ಸೋಂಕಿತರು ಡಿಸ್ಚಾರ್ಜ್ ಆಗಿದ್ದು, 24,915 ಮಂದಿ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರ ಒಂದರಲ್ಲಿಯೇ 2.70 ಲಕ್ಷ ಮಂದಿಗೆ ಸೋಂಕು ಪತ್ತೆಯಾಗಿದೆ. ತಮಿಳುನಾಡು 1.5 ಲಕ್ಷ, ದೆಹಲಿ1.17 ಲಕ್ಷ ಮಂದಿಗೆ ಸೋಂಕು ತಗುಲಿದೆ. ಈ ಮೂರು ಬಿಟ್ಟೆ ನಂತರದ ಸ್ಥಾನದಲ್ಲಿ ಕರ್ನಾಟಕ ಸ್ಥಾನ ಪಡೆದಿದೆ. ನಿನ್ನೆಯೇ ಗುಜರಾತ್, ಉತ್ತರ ಪ್ರದೇಶವನ್ನು ನಮ್ಮ ರಾಜ್ಯ ಮೀರಿಸಿದೆ.ರಾಜ್ಯ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದೆ.



