ನವದೆಹಲಿ: ದೇಶದಾದ್ಯಂತ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದೇ ದಿನ 56,282 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. 904 ಮಂದಿ ಕೊರೊನಾದಿಂದ ಮೃತಪಟ್ಟಿದ್ಧಾರೆ.
ಈ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇನ್ನು 5,95,501 ಸಕ್ರಿಯ ಪ್ರಕರಣಗಳಿದ್ದು, 13,28,337 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದೂವರೆಗೂ 40,699 ಮಂದಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.67ರಷ್ಟಿದೆ.
ಕರ್ನಾಟದಲ್ಲಿ ಬುಧವಾರ 5,619 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1,51,449ಕ್ಕೆ ಏರಿಕೆಯಾಗಿದೆ. ಅಲ್ಲದೇ ಕಳೆದ ದಿನ ಕೊರೊನಾಗೆ 100 ಜನರು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 2,804ಕ್ಕೆ ಬಂದು ತಲುಪಿದೆ.