ನವದೆಹಲಿ: ದೇಶದಲ್ಲಿ ಒಂದೇ ದಿನದಲ್ಲಿ 62,064 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 1,007 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22,15,075ಕ್ಕೆ ಏರಿಕೆಯಾಗಿದೆ. ಇದುವರೆಗೆ ದೇಶದಾದ್ಯಂತ 44,386 ಸಾವು ಸಂಭವಿಸಿದೆ. 15,35,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 6,34,945 ಸಕ್ರಿಯ ಪ್ರಕರಣಗಳಿವೆ,
ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ 1,45,865 ಸಕ್ರಿಯ ಪ್ರಕರಣಗಳಿವೆ. ತಮಿಳುನಾಡಿನಲ್ಲಿ 53,336, ದೆಹಲಿಯಲ್ಲಿ 10,729 ಸಕ್ರಿಯ ಪ್ರಕರಣಗಳಿವೆ.



