ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 4,213 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದು ಈವರೆಗೆ ವರದಿಯಾಗಿರುವ ಪ್ರಕರಣಗಳಲ್ಲಿ ಒಂದೇ ದಿನ ಅತೀ ಹೆಚ್ಚು ಸೋಂಕು ಪತ್ತೆಯಾಗಿರುವುದು ಇದೇ ಮೊದಲಾಗಿದೆ.

ದೇಶದಲ್ಲಿ ಒಟ್ಟು 67,259 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 20,919 ಮಂದಿ ಚೇತರಿಸಿಕೊಂಡಿದ್ದಾರೆ. 44,029 ಮಂದಿ ದೇಶದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 2,212ಕ್ಕೆ ಏರಿದೆ.
ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಸೋಂಕು ಏರಿಕೆಯಾಗಿದೆ. ಕಳೆದ ತಿಂಗಳು ಕೇಂದ್ರ ಸರ್ಕಾರವು ವಿವಿಧ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಹಂಚಿಕೊಂಡಿದ್ದ ವರದಿಯಲ್ಲಿ, ಮೇ 15ರ ವೇಳೆಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 65,000 ಮುಟ್ಟಬಹುದು ಎಂಬ ಅಂದಾಜಿಸಲಾಗಿತ್ತು. ಆದರೆ, ಮೇ 11ಕ್ಕೇ ಇದು 65 ಸಾವಿರ ಗಡಿ ದಾಟಿದೆ.



