ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 3,604 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74,393ಕ್ಕೆ ಏರಿಕೆಯಾಗಿದೆ.
ಇದರಲ್ಲಿ 24,453 ಮಂದಿ ಗುಣಮುಖರಾಗಿದ್ದಾರೆ. 2,502 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, 47,525 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ ಭಾರತ ಸೋಂಕಿತರ ಸಂಖ್ಯೆಯಲ್ಲಿ ಕೆನಡಾವನ್ನು ಹಿಂದಿಕ್ಕಿದ್ದು, ಜಾಗತಿಕ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದೆ.

ಇನ್ನು ದೇಶದಲ್ಲಿ ಮಹಾರಾಷ್ಟ್ರದಲ್ಲಿಯೇ ಅತಿ ಹೆಚ್ಚು ಸೋಂಕಿತರರಿದ್ದು, 25,657 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಒಂದೇ ದಿನ 36 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 957 ಆಗಿದ್ದು, ಗುಜರಾತ್‌ನಲ್ಲಿ 9,250 ಪ್ರಕರಣಗಳು ಪತ್ತೆಯಾಗಿದ್ದು, 557 ಮಂದಿ ಸಾವಿಗೀಡಾಗಿದ್ದಾರೆ.
ದೆಹಲಿಯಲ್ಲಿ 7,949 ಕೋವಿಡ್–19 ಪ್ರಕರಣಗಳು ದಾಖಲಾಗಿವೆ. ತಮಿಳುನಾಡಿನಲ್ಲಿ 9516 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, 67 ಮಂದಿ ಸಾವಿಗೀಡಾಗಿದ್ದಾರೆ. ಇತ್ತ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ಮಂದಿ ಮೃತಪಟ್ಟಿದ್ದಾರೆ.



