ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್–19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಒಂದೇ ದಿನದಲ್ಲಿ 6,654 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆ ಅವಧಿಯಲ್ಲಿ 137 ಜನರು ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 1,25,101 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. 48,533 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 3,720ಕ್ಕೆ ಏರಿಕೆಯಾಗಿದ್ದು, ಇನ್ನು 69,597 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 44,582 ಏರಿಕೆಯಾಗಿದೆ. ಗುಜರಾತ್ 13,268, ದೆಹಲಿ12,319 ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಕರ್ನಾಟದಲ್ಲಿ ನಿನ್ನೆಯ ಸಂಜೆ ವರದಿ ಪ್ರಕಾರ ಸೋಂಕಿತರ ಸಂಖ್ಯೆ1,743ಕ್ಕೆ ಏರಿಕೆಯಾಗಿದೆ. ಇದರಲ್ಲಿ 41 ಜನರು ಮೃತಪಟ್ಟಿದ್ದರೆ, 597 ಮಂದಿ ಗುಣಮುಖರಾಗಿದ್ದಾರೆ. 1,104 ಸೋಂಕಿತರಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.



