ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ 5 ಗಂಟೆಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ರಾಜ್ಯದಲ್ಲಿ 474 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು 29 ಹೊಸ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದೆ. 0
ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ 18 ಜನರು ಮೃತಪಟ್ಟಿದ್ದು, 152 ಮಂದಿ ಕೊರೊನಾ ಸೋಂಕಿನಿಂದ ಮುಕ್ತಿರಾಗಿದ್ದಾರೆ. 304 ವ್ಯಕ್ತಿಗಳಲ್ಲಿ, 299 ರೋಗಿಗಳು ಆಸ್ಪತ್ರೆಗಳಲ್ಲ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದ ಐದು ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ.
ರಾಜ್ಯಾದ್ಯಂತ 477 ಜ್ವರ ಚಿಕಿತ್ಸಾಲಯಗಳಲ್ಲಿ ಒಟ್ಟು 7,673 ವ್ಯಕ್ತಿಗಳನ್ನು ತಪಾಸಣೆ ಮಾಡಲಾಗಿದೆ. ಈವರೆಗೂ ಒಟ್ಟಾರೆ 1,11,712 ವ್ಯಕ್ತಿಗಳಿಗೆ ತಪಾಸಣೆ ನಡೆಸಲಾಗಿದೆ.