ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ.
ಬೆಳಗ್ಗ ರಾಜ್ಯದ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನಲ್ಲಿ ಈ ಮಾಹಿತಿ ನೀಡಿದ್ದು, ಕಲಬುರಗಿಯಲ್ಲಿ ರೋಗಿ ನಂಬರ್ 425ರ ಮಹಿಳೆಯಿಂದ ನಾಲ್ವರಿಗೆ ಕೊರೊನಾ ಹಬ್ಬಿದೆ. ಕಲಬುರಗಿ ಒಂದರಲ್ಲಿಯೇ 8 ಮಂದಿಗೆ ಹಾಗೂ ಬೆಳಗಾವಿಯಲ್ಲಿ 12 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ. ಈವರಗೆ 20 ಮಂದಿ ಮೃತಪಟ್ಟಿದ್ದು, 215 ಮಂದಿ ಗುಣಮುಖರಾಗಿದ್ದಾರೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 9 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 532ಕ್ಕೆ ಏರಿದೆ. ಇದುವರೆಗೆ ಒಟ್ಟು 215 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #ಮನೆಯಲ್ಲೇಇರಿ pic.twitter.com/334Bt0D1Us
— B Sriramulu (@sriramulubjp) April 29, 2020



