Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ 6 ಸಾವಿರ ಗಡಿಯತ್ತ ಕೊರೊನಾ ಪಾಸಿಟಿವ್; ಇಂದು 161 ಕೇಸ್ ಪತ್ತೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ 6 ಸಾವಿರ ಗಡಿಯತ್ತ ಕೊರೊನಾ ಪಾಸಿಟಿವ್; ಇಂದು 161 ಕೇಸ್ ಪತ್ತೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿರ ಸಂಖ್ಯೆ 5,921 ಏರಿಕೆಯಾಗಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 161 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.  ಈ ಮೂಲಕ ಸೋಂಕಿತರ ಸಂಖ್ಯೆ  5,921ಕ್ಕೆ ಏರಿಕೆಯಾಗಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು 66 ಮಂದಿ ಮೃತಪಟ್ಟಂತಾಗಿದೆ.  ಈವರೆಗೆ 2,605 ಮಂದಿ  ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,248 ಸಕ್ರಿಯ ಪ್ರಕರಣಗಳಿವೆ.  12 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಯಾದಗಿರಿಯಲ್ಲಿ 61, ಬೆಂಗಳೂರು ನಗರ 29, ದಕ್ಷಿಣ ಕನ್ನಡ 23, ಕಲಬುರಗಿ 10, ಬೀದರ್ 09, ದಾವಣಗೆರೆ 8, ಕೊಪ್ಪಳ 6, ಶಿವಮೊಗ್ಗ 4, ವಿಜಯಪುರ 2, ಚಿಕ್ಕಬಳ್ಳಾಪುರ 2, ಮೈಸೂರು 2, ಧಾರವಾಡ 2 ಮತ್ತು ಬಾಗಲಕೋಟೆ ಮತ್ತು ತುಮಕೂರಿನಲ್ಲಿ ತಲಾ ಒಂದು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top