ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು 204 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,734 ಏರಿಕೆಯಾಗಿದ್ದು, ಸಾವಿನ ಸಂಖ್ಯೆ 102ಕ್ಕೆ ಏರಿಕೆಯಾಗಿದೆ. ಈವರೆಗೆ 4,804 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2,824 ಸಕ್ರಿಯ ಪ್ರಕರಣಗಳಿವೆ.
ಇಂದು 348 ಜನ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಇಬ್ಬರು ವಿದೇಶದಿಂದ ಬಂದಿದ್ದು, 106 ಮಂದಿ ಬೇರೆ ರಾಜ್ಯಗಳಿಂದ ಬಂದಿದ್ದಾರೆ.
ಬೆಂಗಳೂರು ನಗರದಲ್ಲಿ 55, ಯಾದಗಿರಿ 37, ಬಳ್ಳಾರಿ 29, ಕಲಬುರ್ಗಿ 19, ಬೀದರ್ 12, ದಕ್ಷಿಣಕನ್ನಡ, ಧಾರವಾಡ ತಲಾ 8, ಮಂಡ್ಯ 7, ಹಾಸನ 5, ಉಡುಪಿ, ಬಾಗಲಕೋಟೆ, ಶಿವಮೊಗ್ಗ ತಲಾ 4, ದಾವಣಗೆರೆ, ಚಿಕ್ಕಬಳ್ಳಾಪುರ, ಉತ್ತರಕನ್ನಡ ತಲಾ 3, ರಾಯಚೂರು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ 1 ಪಾಸಿಟಿವ್ ಪತ್ತೆಯಾಗಿದೆ.



