ಡಿವಿಜಿ ಸುದ್ದಿ, ಬೆಂಗಳೂರು: ಇಂದು ಬೆಂಗಳೂರು ಒಂದರಲ್ಲಿಯೇ 1,172 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ1,839 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು ಒಂದೇ ದಿನ ರಾಜ್ಯದ ವಿವಿಧ ಭಾಗದಲ್ಲಿ 42 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ.
ಒಟ್ಟು 9,244 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 11,966 ಪ್ರಕರಣಗಳು ಸಕ್ರಿಯವಾಗಿವೆ. ರಾಜ್ಯದಲ್ಲಿ ಒಟ್ಟು 335 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇದಿನೇ ಗಣನೀಯವಾಗಿ ಹೆಚ್ಚುತ್ತಿದೆ. ಒಟ್ಟು ಸೋಂಕಿತರ ಸಂಖ್ಯೆ 8,345ಕ್ಕೆ ತಲುಪಿದೆ. ಒಟ್ಟು 129 ಮಂದಿ ಮೃತಪಟ್ಟಿದ್ದಾರೆ. 965 ಸೋಂಕಿತರು ಗುಣಮುಖರಾಗಿದ್ದು, ಇನ್ನೂ 7,250 ಸಕ್ರಿಯ ಪ್ರಕರಣಗಳಿವೆ . ಇನ್ನು ಇಂದು ದಕ್ಷಿಣ ಕನ್ನಡ ಹಾಗೂ ಬಳ್ಳಾರಿಯಲ್ಲಿ ಕ್ರಮವಾಗಿ 75 ಮತ್ತು73 ಪ್ರಕರಣಗಳು ಪತ್ತೆಯಾಗಿವೆ.
ಸಂಜೆಯ ಪತ್ರಿಕಾ ಪ್ರಕಟಣೆ 04/07/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/sCHmzZyZBB@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/iVYVg5pHSA— Karnataka Health Department (@DHFWKA) July 4, 2020



