ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 22 ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ.
ಇಂದು ಮಧ್ಯಾಹ್ನದ ವರಗಿನ ವರದಿ ಪ್ರಕಾರ ಬೆಳಗಾವಿಯಲ್ಲಿ 14, ವಿಜಯಪುರದಲ್ಲಿ 2, ಬೆಂಗಳೂರು ನಗರದಲ್ಲಿ 3, ದಕ್ಷಿಣ ಕನ್ನಡದಲ್ಲಿ 1, ತುಮಕೂರಿನಲ್ಲಿ 1 ಮತ್ತು ದಾವಣಗೆರೆಯಲ್ಲಿ 1 ಪ್ರಕರಣ ವರದಿಯಾಗಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 22 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 557ಕ್ಕೆ ಏರಿದೆ. ಇದುವರೆಗೆ ಒಟ್ಟು 223 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #ಮನೆಯಲ್ಲೇಇರಿ #IndiaFightsCorona pic.twitter.com/QIcau8upOS
— B Sriramulu (@sriramulubjp) April 30, 2020
ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ ಹೊಸದಾಗಿ 14 ಮಂದಿಗೆ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿದೆ.