ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು 2798 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, 70 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 36, 216 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 613ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇಂದು 880 ಮಂದಿ ಗುಣಮಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಈ ವರೆಗೆ ಕೊರೊನಾ ವೈರಸ್ನಿಂದ 14716 ಮಂದಿ ಗುಣಮುಖರಾಗಿದ್ದಾರೆ.
ಬೆಂಗಳೂರಿನಲ್ಲಿಂದು ಒಂದೇ ದಿನ 1533 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆಯನ್ನು 16862ಕ್ಕೆ ಏರಿಕೆಯಾಗಿದೆ. ಇದೇ ವೇಳೆ ದಕ್ಷಿಣ ಕನ್ನಡದಲ್ಲಿ ಇಂದು 186 ಮಂದಿ, ಉಡುಪಿಯಲ್ಲಿ 90 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.
ಕೊರೊನಾ ವೈರಸ್ ದಿನದಿಂದದಿನಕ್ಕೆ ಹೆಚ್ಚಾಗುತ್ತಲೇ ಇರುವ ಕಾರಣಕ್ಕೆ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ. ಇದೇ 14ರಿಂದ ಒಂದು ವಾರಗಳ ಕಾಲ, ಅಂದರೆ, 22ರ ಬೆಳಗ್ಗೆ ವರೆಗೆ ಲಾಕ್ ಜಾರಿಯಲ್ಲಿರಲಿದೆ ಎಂದು ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ.



