ಡಿವಿಜಿ ಸುದ್ದಿ, ವಿಜಯಪುರ: ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಭಯಗೊಂಡ 57 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೋರಾಪುರಪೇಟೆ ನಡೆದಿದೆ.
ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕೋವಿಡ್-19 ತಗುಲಿರುವುದು ದೃಢವಾಗಿತ್ತು. ಖಾಸಗಿ ಆಸ್ಪತ್ರೆ ವೈದ್ಯರು ಕೋವಿಡ್ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರು. ಕೋವಿಡ್ ಜಿಲ್ಲಾಸ್ಪತ್ರೆಗೆ ದಾಖಲಾಗುವ ಬದಲು ಮನೆಗೆ ಹೋಗಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ.



