ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, 12 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,944ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 114ಕ್ಕೆ ಏರಿಕೆಯಾಗಿದೆ. ಈವರೆಗೆ 4,983 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2,843 ಪ್ರಕರಣಗಳು ಸಕ್ರಿಯವಾಗಿವೆ. 179 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಇಂದು ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ 21 ಮಂದಿ ಬೇರೆ ದೇಶದಿಂದ ಬಂದವರಾದರೆ, 58 ಮಂದಿ ಅನ್ಯ ರಾಜ್ಯ ಪ್ರಯಾಣಿಕರು. ಬಳ್ಳಾರಿ ಮತ್ತು ಕಲಬುರ್ಗಿಯಲ್ಲಿ ತಲಾ 48, ದಕ್ಷಿಣ ಕನ್ನಡ 23, ರಾಮನಗರದಲ್ಲಿ 21, ಬೆಂಗಳೂರು ನಗರದಲ್ಲಿ 17, ಯಾದಗಿರಿಯಲ್ಲಿ 8, ಮಂಡ್ಯದಲ್ಲಿ 7, ಬೀದರ್‌ನಲ್ಲಿ 6, ಗದಗದಲ್ಲಿ 5 ಪ್ರಕರಣಗಳು ವರದಿಯಾಗಿವೆ. ರಾಯಚೂರು, ಹಾಸನ, ಧಾರವಾಡದಲ್ಲಿ ತಲಾ 4 ಪ್ರಕರಣಗಳು, ದಾವಣಗೆರೆ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 3, ವಿಜಯಪುರ, ಮೈಸೂರು ಮತ್ತು ಉತ್ತರಕನ್ನಡದಲ್ಲಿ ತಲಾ 2, ಬಾಗಲಕೋಟೆ, ಶಿವಮೊಗ್ಗ ಮತ್ತು ಕೊಪ್ಪಳದಲ್ಲಿ ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ.




