ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 8324 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,27076ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು 8,110 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,35128ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ 155 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 5483 ಮಂದಿ ಮೃತಪಟ್ಟಿದ್ದಾರೆ.
ಐಸಿಯುನಲ್ಲಿ 721 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇನ್ನು 86,446 ಸಕ್ರಿಯ ಕೇಸ್ ಗಳಿವೆ.



