Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇಂದು ಬರೋಬ್ಬರಿ 9,058 ಕೊರೊನಾ ಪಾಸಿಟಿವ್; 135 ಸಾವು

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇಂದು ಬರೋಬ್ಬರಿ 9,058 ಕೊರೊನಾ ಪಾಸಿಟಿವ್; 135 ಸಾವು

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮುಂದುವರಿದಿದ್ದು, ಇಂದು ಬರೋಬ್ಬರಿ 9,058 ಮಂದಿಯಲ್ಲೊ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,51,481ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 135 ಜನ ಸಾವನ್ನಪ್ಪಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 5,837ಕ್ಕೆ ಏರಿಕೆಯಾಗಿದೆ. ಇನ್ನೂ 762 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 5,159 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 2,54,626 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇನ್ನು 90,999 ಸಕ್ರಿಯ  ಪ್ರಕರಣಗಳಿವೆ.

ಬೆಂಗಳೂರಲ್ಲಿ ಇಂದು 2,967 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,32,092ಕ್ಕೆ ಏರಿಕೆಯಾಗಿದೆ. 40 ಜನ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಇಂದು 1,137 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 91,180ಕ್ಕೆ ಏರಿಕೆಯಾಗಿದೆ.

ಬಾಗಲಕೋಟೆ 136, ಬಳ್ಳಾರಿ 393, ಬೆಳಗಾವಿ 316, ಬೆಂಗಳೂರು ಗ್ರಾಮೀಣ 145, ಬೆಂಗಳೂರು ನಗರ 2,967, ಬೀದರ್ 63, ಚಾಮರಾಜನಗರ 49, ಚಿಕ್ಕಬಳ್ಳಾಪುರ 106, ಚಿಕ್ಕಮಗಳೂರು 210, ಚಿತ್ರದುರ್ಗ 164, ದಕ್ಷಿಣ ಕನ್ನಡ 352, ದಾವಣಗೆರೆ 289, ಧಾರವಾಡ 199, ಗದಗ 194, ಹಾಸನ 461, ಹಾವೇರಿ 153, ಕಲಬುರಗಿ 220, ಕೊಡಗು 54, ಕೋಲಾರ 64, ಕೊಪ್ಪಳ 195, ಮಂಡ್ಯ 197, ಮೈಸೂರು 737, ರಾಯಚೂರು 245, ರಾಮನಗರ 105, ಶಿವಮೊಗ್ಗ 233, ತುಮಕೂರು 327, ಉಡುಪಿ 161, ಉತ್ತರ ಕನ್ನಡ 114, ವಿಜಯಪುರ 67 ಮತ್ತು ಯಾದಗಿರಿಯಲ್ಲಿ 142 ಪ್ರಕರಣಗಳು ವರದಿಯಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top