Connect with us

Dvg Suddi-Kannada News

ರಾಜ್ಯದಲ್ಲಿ ಮತ್ತೆ 8 ಮಂದಿಗೆ ಕೊರೊನಾ ಪತ್ತೆ; ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆ  

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮತ್ತೆ 8 ಮಂದಿಗೆ ಕೊರೊನಾ ಪತ್ತೆ; ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆ  

ಡಿವಿಜಿ ಸುದ್ದಿ, ಬೆಂಗಳೂರು

: ರಾಜ್ಯದಲ್ಲಿ ಇಂದು ಹೊಸದಾಗಿ 8 ಮಂದಿಗೆ ಕೊರೊನಾ ಸೋಂಕು  ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 659ಕ್ಕೇರಿಕೆಯಾಗಿದೆ.

ಇಂದು ಬೆಳಗ್ಗೆ ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ. ಇಂದು ಮೂವರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹಸಿರು ವಲಯದಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ಯುವಕನಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.  ಎರಡು ದಿನಗಳ ಹಿಂದೆ ಯುವಕನಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು. ಬೆಂಗಳೂರಿನ ಶಿವಾಜಿನಗರದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ವ್ಯಕ್ತಿ ವಾಸವಾಗಿದ್ದ ಒಂದೇ ಕೋಣೆಯಲ್ಲಿ 7 ಜನರು ವಾಸವಾಗಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ಸೋಂಕಿತ ವ್ಯಕ್ತಿ ಕ್ವಾರಂಟೈನ್ ಮಾಡಿದ್ದ ಹೋಟೆಲ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದು, ಇಲ್ಲಿ 72 ಜನರು ಉಳಿದುಕೊಂಡಿದ್ದರು. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ 13 ಜನರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸೋಂಕು ಹೇಗೆ ತಗುಲಿದೆ ಎಂಬುವುದು ತಿಳಿದು ಬಂದಿಲ್ಲ.

ಬೆಂಗಳೂರಿನ ಮಂಗಮ್ಮನ ಪಾಳ್ಯದ 45 ವರ್ಷದ ಕೂಲಿ ಕಾರ್ಮಿಕನಿಗೆ ಸೋಂಕು ತಗುಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಯನಗರದ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾದ ಕೋವಿಡ್-19 ಘಟಕಕ್ಕೆ ಶಿಫ್ಟ್ ಮಾಡಲಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರ್ಮಿಕ ಐದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದನು.

ಇಂದು ಬೆಳಗ್ಗೆ ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ. ಇಂದು ಮೂವರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ವ್ಯಕ್ತಿ 18 ಜನರ ತಂಡದೊಂದಿಗೆ ಉತ್ತರಾಖಂಡ ಪ್ರವಾಸಕೈಗೊಂಡಿದ್ದರು. ಸೋಂಕಿತನ ಸಂಪರ್ಕದಲ್ಲಿದ್ದ 12 ಜನರ ಆರೋಗ್ಯದ ಮೇಲೆ ನಿಗಾ ಇಡಲಾಗಿದ್ದು, ಜಿಲ್ಲಾಡಳಿತ ಎಲ್ಲರ ವರದಿಗಾಗಿ ಕಾಯುತ್ತಿದೆ.

ರೋಗಿ ನಂಬರ್ 640 (62 ವರ್ಷ)ದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಅಸ್ತಮಾ, ಶ್ವಾಸಕೋಶ ಕಾಯಿಲೆ, ಬೊಜ್ಜು ಸೇರಿ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದು, 3-4 ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಈ ವೃದ್ಧೆಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top