ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇಂದು 255 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11892ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾತಿ ನೀಡಿದೆ. ಇಂದು ಕೊರೊನಾದಿಂದ 405 ಮಂದಿ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 8969ಕ್ಕೆ ಏರಿಕೆಯಾಗಿದೆ.
ಇಂದು ಎರಡು ಸಾವು ಸಂಭವಿಸಿದ್ದು, ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 2703 ಸಕ್ರಿಯ ಪ್ರಕರಣಗಳಿವೆ.



