ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದೆ . ಇಂದು ಹೊಸದಾಗಿ 8 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 701ಕ್ಕೇರಿಕೆಯಾಗಿದೆ. 363 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ 694) ಕೊರೊನಾಗೆ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೇರಿಕೆಯಾಗಿದೆ. ದಾವಣಗೆರೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ 4ಕ್ಕೇರಿಕೆಯಾಗಿದೆ.
ಇಂದು ಬೆಳಗ್ಗೆ ಬಿಡುಗಡೆಯಾದ ಬುಲೆಟಿನ್ ನಲ್ಲಿ, ದಾವಣಗೆರೆ ಮತ್ತು ಕಲಬುರಗಿಯಲ್ಲಿ ತಲಾ ಮೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ. ಬೆಳಗಾವಿಯ 13 ವರ್ಷದ ಬಾಲಕಿಯಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.



