ಡಿವಿಜಿ ಸುದ್ದಿ, ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತೆ ಒಂದು ವಾರ ಲಾಕ್‍ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಸಿಎಂ ಯಡಿಯೂರಪ್ಪ ಕೆಲ ಹೊತ್ತಿನಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಒಂದು ವಾರದಿಂದ ಬೆಂಗಳೂರುಒಂದರಲ್ಲಿಯೇ ಸಾವಿರ ಗಡಿ ದಾಟಿದ ಹಿನ್ನೆಲೆ, ಮತ್ತೆ ಲಾಕ್ ಡೌನ್ ಗೆ ಸರ್ಕಾರ ನಿರ್ಧರಿಸಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ತಜ್ಞ ಲಾಕ್ ಡೌನ್ ಸಲಹೆ ನೀಡಿದ್ದರಿಂದ ಒಂದು ವಾರದವರೆಗೆ ಲಾಕ್‍ಡೌನ್ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಮಂಗಳವಾರದಿಂದಲೇ ಲಾಕ್‍ಡೌನ್ ಮಾಡಲು ಸರ್ಕಾರ ತೀರ್ಮಾನಿದೆ. ಇಂದು ರಾತ್ರಿ 8 ಗಂಟೆಯಿಂದಲೇ ಭಾನುವಾರದ ಲಾಕ್‍ಡೌನ್ ಆರಂಭವಾಗಲಿದೆ. ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ಇಡೀ ರಾಜ್ಯದಲ್ಲಿ ಸಂಡೇ ಲಾಕ್‍ಡೌನ್ ಜಾರಿಯಲ್ಲಿರಲಿದೆ.



