Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ 600 ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ಇಂದು ಮತ್ತೆ 12 ಜನಕ್ಕೆ ಸೋಂಕು

ಪ್ರಮುಖ ಸುದ್ದಿ

ರಾಜ್ಯದಲ್ಲಿ 600 ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ; ಇಂದು ಮತ್ತೆ 12 ಜನಕ್ಕೆ ಸೋಂಕು

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.  ಇಂದು 12 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ.

ಇಂದು ಬೆಳಗ್ಗೆ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಬೆಂಗಳೂರು ನಗರದಲ್ಲಿ 4 , ವಿಜಯಪುರದಲ್ಲಿ 2, ತುಮಕೂರಿನಲ್ಲಿ 2, ಚಿಕ್ಕಬಳ್ಳಾಪುರದಲ್ಲಿ 1, ಬೀದರ್ 1, ಬೆಳಗಾವಿಯಲ್ಲಿ 1, ಬಾಗಲಕೋಟೆಯ 1 ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನ 30 ವರ್ಷದ ಪುರುಷ. ರೋಗಿ ನಂಬರ್ 565ರ ಸಂಪರ್ಕದಲ್ಲಿದ್ದರು. ಬೆಂಗಳೂರಿನಲ್ಲಿ ರೋಗಿ ಸಂಖ್ಯೆ 565 ಒಬ್ಬರಿಂದಲೇ ಮೂವರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ರೋಗಿ ನಂಬರ್ 557, 63ವರ್ಷದ ವೃದ್ಧ ಹಾಗೂ ಬೀದರಿನಲ್ಲಿ 83 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ 25 ಮಂದಿ ಸಾವನ್ನಪ್ಪಿದ್ದು, 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತ ಏಳು ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top