Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇಂದು 22 ಕೊರೊನಾ ಪ್ರಕರಣ ಪತ್ತೆ; ದಾವಣಗೆರೆಯಲ್ಲಿಯೇ 12 ಪ್ರಕರಣ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇಂದು 22 ಕೊರೊನಾ ಪ್ರಕರಣ ಪತ್ತೆ; ದಾವಣಗೆರೆಯಲ್ಲಿಯೇ 12 ಪ್ರಕರಣ

ಡಿವಿಜಿ ಸುದ್ದಿ, ಬೆಂಗಳೂರುರಾಜ್ಯದಲ್ಲಿ ಇಂದು ಹೊಸದಾಗಿ  22 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ದಾವಣಗೆರೆಯಲ್ಲಿಯೇ 12 ಪ್ರಕರಣ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದಾಗಿ 29 ಮಂದಿ ಮೃತಪಟ್ಟಿದ್ದು, 331 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದಾವಣಗೆರೆಯಲ್ಲಿ ಇಂದು ಕೂಡ ಒಂದು ಪಾಸಿಟಿವ್ ಕೇಸ್ ಮೇತಪಟ್ಟಿದೆ.  306 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  6 ಸೋಂಕಿತರಿಗೆ ತೀವ್ರ ನಿಗಾ ಘಟಕದಲ್ಲಿ ನೀಡಲಾಗುತ್ತಿದೆ

ಈ ಮಾಹಿತಿ ನಿನ್ನೆಯ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆ ವರೆಗಿನ ಮಾಹಿತಿಯಾಗಿದೆ. ದಾವಣಗೆರೆ 12 , ಬೆಂಗಳೂರು ನಗರದಲ್ಲಿ 3,  ಬಾಗಲಕೋಟೆಯಲ್ಲಿ 2, ಬಳ್ಳಾರಿ, ದಕ್ಷಿಣ ಕನ್ನಡದಲ್ಲಿ ತಲಾ 1, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 1, ಹಾವೇರಿಯ ಸಾವಣೂರು ಮತ್ತು ಧಾರವಾಡದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಒಟ್ಟು ಇಂದು 22 ಪ್ರಕರಣಗಳು  ಪತ್ತೆಯಾದಂತಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top