ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿಂದು 21 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 444ಕ್ಕೆ ಏರಿಕೆಯಾಗಿದೆ.
ಇಂದು 11 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 339 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 14 ಮಂದಿ ಮೃತಪಟ್ಟಿದ್ದು, ಇನ್ನು ಒಟ್ಟು 91 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಇಂದು ಪತ್ತೆಯಾದ 21 ಪಾಸಿಟಿವ್ ಪ್ರಕರಣಗಳಲ್ಲಿ ದಾವಣಗೆರೆ ನಗರ ಮತ್ತು ತಾಲ್ಲೂಕಿಗೆ ಸಂಬಂಧಿಸಿದಂತೆ 13 ಪಾಸಿಟಿವ್ ಪತ್ತೆಯಾಗಿದ್ದು, ಹರಿಹರ ನಗರದಲ್ಲಿ 06, ರಾಣೇಬೆನ್ನೂರು ಮೂಲದವರು 01 ಹಾಗೂ ಹರಪನಹಳ್ಳಿ ತಾಲ್ಲೂಕಿನ 01 ಪಾಸಿಟಿವ್ ಕೇಸ್ ಗಳು ಜಿಲ್ಲೆಯಲ್ಲಿ ಪತ್ತೆಯಾಗಿವೆ. ದಾವಣಗೆರೆ 49 ವರ್ಷದ ಕೆಎಸ್ ಆರ್ ಸಿಟಿಸಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.



