ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸತತ ಏರಿಕೆ ನಂತರ ಇಂದು ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಜಿಲ್ಲೆಯ ಜನರಲ್ಲಿ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.
ಕಳೆದ 15 ದಿನಗಳಿಂದ ನಿರಂತರವಾಗಿ ಏರು ಗತಿಯಲ್ಲಿ ಸಾಗಿದ್ದ ಸೋಂಕಿತರ ಸಂಖ್ಯೆ ಒಂದೇ ದಿನ ಗರಿಷ್ಠ 225 ಸಹ ತಲುಪಿತ್ತು. ನಿನ್ನೆ ಕೂಡ 178 ಪಾಸಿಟಿವ್ ಪ್ರಕಣಗಳು ಬಂದು ಎಲ್ಲರನ್ನು ಬೆಚ್ಚಿ ಬೀಳಿಸಿತ್ತು. ಇಂದು 41 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2428ಕ್ಕೆ ಏರಿಕೆಯಾಗಿದೆ. ಇಂದು 82 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು 1561 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದಂತಾಗಿದೆ.
ದಾವಣಗೆರೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಮಾತ್ರ ಕಡಿಮೆ ಆಗುತ್ತಿಲ್ಲ. ಇಂದು ಕೂಡ ಇಬ್ಬರು ಮೃತಪಟ್ಟಿದ್ದು, ಒಟ್ಟು 57 ಮಂದಿ ಜಿಲ್ಲೆಯಲ್ಲಿ ಮೃತಪಟ್ಟಂತಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಇನ್ನು 810 ಸಕ್ರಿಯ ಪ್ರಕಣಗಳಿವೆ.



