ಮುಂಬೈ: ಕೊರೊನಾ ಸೋಂಕಿತ ತಬ್ಲಿಘಿಯೊಬ್ಬ ಐಸೋಲೇಷನ್ ವಾರ್ಡ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಕೋಲಾದಲ್ಲಿ ನಡೆದಿದೆ.
ಅಸ್ಸಾಂ ರಾಜ್ಯದ ನಾಗಾಂವ್ ಗ್ರಾಮದ 30 ವರ್ಷದ ಯುವಕ ಎಂದು ಗುರುತಿಸಲಾಗಿದೆ. ಮೃತ ಸೋಂಕಿತ ಮಾರ್ಚ್ 6ರಿಂದ 8ರವರೆಗೆ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ಜಮಾತ್ ನಲ್ಲಿ ಭಾಗಿಯಾಗಿದ್ದ. ತದನಂತರ ಅಕೋಲಾಗೆ ಬಂದಿದ್ದನು.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜಿತೇಂದ್ರ ಪಾಪಲಕರ್, ಏಪ್ರಿಲ್ 7ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎಲ್ಲರ ಆರೋಗ್ಯದಲ್ಲಿ ಬದಲಾವಣೆ ಕಂಡು ಬಂದಿದ್ದರಿಂದ ಸದಸ್ಯರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 10ರಂದು ಬಂದ ವರದಿಯಲ್ಲಿ ಕೊರೊನಾ ದೃಢಪಟ್ಟಿತ್ತು.
ಶನಿವಾರ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಸ್ಪತ್ರೆಯಲ್ಲಿ ಹರಿತವಾದ ವಸ್ತುವಿನಿಂದ ಆತ ಕತ್ತು ಕುಯ್ದುಕೊಂಡಿದ್ದಾನೆ. ಇದೇ ಐಸೋಲೇಷನ್ ವಾರ್ಡ್ ನಲ್ಲಿ 12 ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.



