Connect with us

Dvgsuddi Kannada | online news portal | Kannada news online

ದೇಶದಲ್ಲಿ ಒಂದೇ ದಿನ 3,390 ಕೊರೊನಾ ಸೋಂಕಿತ ಹೊಸ ಪ್ರಕರಣ

ಪ್ರಮುಖ ಸುದ್ದಿ

ದೇಶದಲ್ಲಿ ಒಂದೇ ದಿನ 3,390 ಕೊರೊನಾ ಸೋಂಕಿತ ಹೊಸ ಪ್ರಕರಣ

ನವದೆಹಲಿಇಡೀ ದೇಶದಲ್ಲಿ  ಒಂದೇ ದಿನ 3,390 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು,103 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 56,342ಕ್ಕೆ ಏರಿಕೆಯಾಗಿದೆ.  ಈವರೆಗೆ ಒಟ್ಟು 1886 ಜನರು ಮೃತಪಟ್ಟಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ 37,916 ಪ್ರಕರಣಗಳು ಸಕ್ರಿಯವಾಗಿವೆ. ಇವರೆಲ್ಲಾ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ವಿವಿಧ ಕ್ವಾರಂಟೈನ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ 16,539 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿದ್ದಾರೆ.

ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್‌, ದೆಹಲಿ, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ 16,758, ತಮಿಳುನಾಡಿನಲ್ಲಿ 4,829, ದೆಹಲಿಯಲ್ಲಿ 5,532, ಗುಜರಾತ್‌ನಲ್ಲಿ 6,625, ಮಧ್ಯಪ್ರದೇಶದಲ್ಲಿ 3,318 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗುತ್ತಿರುವುದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಕನಿಷ್ಠ 531 ಪೊಲೀಸ್‌ ಸಿಬ್ಬಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top