ಡಿವಿಜಿ ಸುದ್ದಿ, ಬೆಂಗಳೂರು: ಸಾರ್ವಜನಿಕರ ತೀವ್ರ ವಿರೋಧದಿಂದ ಲಾಕ್ ಡೌನ್ ನಿಯಮ ಸಡಿಲಿಕೆಯನ್ನು ಸರ್ಕಾರ ವಾಪಸ್ಸು ಪಡೆದಿದೆ. ಏಪ್ರಿಲ್ 20ರ ನಂತರ ಬೈಕ್ ಸಂಚಾರಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ವಾಪಸ್ ತೆಗೆದುಕೊಂಡಿದೆ.

ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ಸು ಪಡೆದಿದೆ. ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
- ದ್ವಿ-ಚಕ್ರ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ ನಿರ್ಧಾರವನ್ನು ಪುನರ್ ಪರಿಶೀಲಿಸಿ, ದ್ವಿ-ಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಲಾಕ್ ಡೌನ್ ಯಥಾಸ್ಥಿತಿಯನ್ನು ಮುಂದುವರಿಯಲಿದೆ.
- ಐ.ಟಿ.ಬಿ.ಟಿ. ಕ್ಷೇತ್ರದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕೊಟ್ಟು, ಉಳಿದಂತೆ ಮನೆಯಿಂದಲೇ ಕೆಲಸ ನೀತಿಯನ್ನು ಮುಂದುವರೆಸಲಾಗುವುದು.
ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯಮಂತ್ರಿಗಳು, ಕೊರೊನಾ ಪ್ರಕರಣ ಪತ್ತೆ ಇಲ್ಲದ ಪ್ರದೇಶದಲ್ಲಿ ಏಪ್ರಿಲ್ 20ರ ನಂತರ ಲಾಕ್‍ಡೌನ್ ನಿಯಮಗಳಲ್ಲಿ ಸಡಿಲಿಕೆ ತರುವುದಾಗಿ ಹೇಳಿದ್ದರು. ಯಾವುದೇ ಪಾಸ್ ಇಲ್ಲದಿದ್ದರೂ ದ್ವಿಚಕ್ರ ವಾಹನಗಳು ರಸ್ತೆಗಿಳಿಯಬಹುದು ಎಂದು ಸೂಚಿಸಿದ್ದರು. ಈ ನಿರ್ಣಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಸಂಜೆ ನಿಯಮ ವಾಪಸ್ಸು ಪಡೆದಿದೆ.



