ಡಿವಿಜಿ ಸುದ್ದಿ, ಬೆಂಗಳೂರು: ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಾಗಾಟಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಕರೆಯಲಾಗಿದ್ದ ಸಭೆಯಲ್ಲಿ ಏಕವಚನದಲ್ಲೇ ಸಚಿವರಾದ ಎಸ್.ಟಿ ಸೋಮಶೇಖರ್ ಹಾಗೂ ನಾರಾಯಣಗೌಡ ಕಿತ್ತಾಡಿಕೊಂಡಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ಇಬ್ಬರು ಸಚಿವರು ಕಿತ್ತಾಡಿಕೊಂಡಿದ್ದು, ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮಶೇಖರ್ ಹಾಗೂ ನಾರಾಯಣಗೌಡ ಒಬ್ಬರ ಮೇಲೊಬ್ಬರು ವಾಗ್ದಾಳಿ ನಡೆಸಿದ್ದಾರೆ.
ಲಾಕ್‍ಡೌನ್ ವಿಚಾರದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳ ಸುಗಮ ಸಾಗಾಟ ಸಂಬಂಧ ನಡೆಯುತ್ತಿರುವ ಸಭೆಯಲ್ಲಿ ಏಕವಚದಲ್ಲಿ ಸಚಿವರು ಬೈದಾಡಿಕೊಂಡಿದ್ದಾರೆ.