ಡಿವಿಜಿ ಸುದ್ದಿ, ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಈ ಹಿನ್ನೆಲೆ ಶಿವಮೊಗ್ಗದ ಸಂತೆಕಡೂರಿನಲ್ಲಿ ಶ್ರೀನಿವಾಸ್ ಕೋಳಿ ಫಾರಂನ ಮಾಲೀಕ ಶ್ರೀನಿವಾಸ್ ಸುಮಾರು 4 ಸಾವಿರ ಜೀವಂತ ಸಮಾಧಿ ಮಾಡಿದ್ದಾರೆ.
ಕೊರೊನಾ ವೈರಸ್‍ನಿಂದಾಗಿ ಜಗತ್ತಿನ ಹಲವು ದೇಶಗಳ ಆರ್ಥಿಕ ವ್ಯವಸ್ಥೆಯೇ ಅಲ್ಲೋಲ ಕಲ್ಲೋಲವಾಗಿದೆ. ರಾಜ್ಯದಲ್ಲಿಯೂ ಕೊರೊನಾ ವೈರಸ್ ಭೀತಿಯ ಜೋರಾಗಿದ್ದು, ಕುಕ್ಕುಟೋದ್ಯಮದ ಮೇಲೆ ಪರಿಣಾಮ ಭೀರಿದೆ. ಹೀಗಾಗಿ ಬೆಲೆ ಕುಸಿತದಿಂದ ಕಂಗೆಟ್ಟ ಕೋಳಿ ಫಾರಂ ಮಾಲೀಕ ಜೀವಂತ ಕೋಳಿ ಕೊಂದು ಹಾಕಿದ್ದಾನೆ.
22 ದಿನಗಳ ಸುಮಾರು 4 ಸಾವಿರ ಕೋಳಿ ಮರಿಗಳನ್ನು ಗುಂಡಿ ತೆಗೆದು ಜೀವಂತವಾಗಿ ಹೂಳಲಾಗಿದೆ. ಕಳೆದ ನಾಲ್ಕು ದಿನಗಳಿಂದ ಕೋಳಿ ಮಾಂಸ ಮಾರಾಟಗಾರರು ಕೋಳಿ ಖರೀದಿಗೆ ಹಿಂದೇಟು ಹಾಕಿದ್ದು, 170 ರೂಪಾಯಿ ಇದ್ದ ಕೋಳಿ ಮಾಂಸದ ಬೆಲೆ ಇದೀಗ ಕೇವಲ 70 ರೂ. ಗೆ ಇಳಿದಿದೆ. ಇದರಿಂದ ಭಾರೀ ನಷ್ಟವುಂಟಾಗಿದ್ದು, ನಷ್ಟ ಅನುಭವಿಸುವ ಬದಲು ಜೀವಂತವಾಗಿ ಹೂತರೆ ಇನ್ನಷ್ಟು ನಷ್ಟವುಂಟಾಗುವುದು ತಪ್ಪುತ್ತದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
12 ಅಡಿ ಆಳದ ಗುಂಡಿ ತೆಗೆದು ಜೀವಂತವಾಗಿ ಕೋಳಿ ಮರಿಗಳನ್ನು ಹೂತು ಹಾಕಿದ್ದಾರೆ. ಶ್ರೀನಿವಾಸ್ ಅವರಿಗೆ ಒಂದು ಕೆಜಿ ಕೋಳಿಗೆ ಕೇವಲ 8 ರೂಪಾಯಿ ಮಾತ್ರ ಸಿಗುತ್ತಿದ್ದು, ಕೋಳಿ ಸಾಕಲು 16 ರೂ. ವರೆಗೂ ಖರ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎರಡೂವರೆ ಲಕ್ಷ ಖರ್ಚಾಗಿದ್ದು, ಇವುಗಳನ್ನು ಸಾಕಲು ಮತ್ತೆ ಲಕ್ಷಾಂತರ ರೂಪಾಯಿ ಬೇಕು . ಹೀಗಾಗಿ ಶ್ರೀನಿವಾಸ್ ಕೋಳಿ ಮರಿ ಜೀವಂತ ಸಮಾಧಿ ಮಾಡಿದ್ದಾರೆ.