ಡಿವಿಜಿ ಸುದ್ದಿ, ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಈ ಬಗ್ಗೆ ಜಿ.ಟಿ. ದೇವೇಗೌಡ ಅವರು ಟ್ವೀಟ್ ಮಾಡಿದ್ದು, ನಾನು ಕೋವಿಡ್-19ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
https://twitter.com/GTDevegowda/status/1290878771097108481?ref_src=twsrc%5Etfw%7Ctwcamp%5Etweetembed%7Ctwterm%5E1290878771097108481%7Ctwgr%5E&ref_url=https%3A%2F%2Fwww.prajavani.net%2Fkarnataka-news%2Fjds-mla-g-t-devegowda-tested-positive-for-covid-19-coronavirus-750918.html
ಜಿ.ಟಿ. ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಢಪಟ್ಟಿದೆ. ಈ ಇಬ್ಬರು ನಾಯಕರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.