ಡಿವಿಜಿ ಸುದ್ದಿ, ಕಲಬುರಗಿ: ಕೊರೊನಾ ಸೋಂಕಿತ ವ್ಯಕ್ತಿಗಳ ಜೊತೆಗೆ ಸಂಪರ್ಕ ಹೊಂದಿರದ ಎರಡು ವರ್ಷದ ಹೆಣ್ಣು ಮಗುವಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮಗಳಿಗೆ ಕೊರೊನಾ ಸೋಂಕು ಹರಡಿದೆ ಎಂದು ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ಟೀಟ್ ನಲ್ಲಿ ತಿಳಿಸಿದ್ದಾರೆ.
A 2 year old has been identified as Corona +ve in Chittapur.
Had a video conference with taluk officials & we are taking precautionary & preventive measures to ensure the infection doesn’t spread by sealing off the area & will be checking for more people who might be infected 1/n pic.twitter.com/fw3527hY7h— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 12, 2020
ಆ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚಿಸಿದ್ದಾರೆ.ಶನಿವಾರ ಸಂಜೆ ಮನೆ ಮುಂದೆ ಆಟವಾಡಿಕೊಂಡಿದ್ದಾಗ ಗಾಯ ಮಾಡಿಕೊಂಡಿದ್ದಳು. ಬಳಿಕ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಕೊರೊನಾ ಟೆಸ್ಟ್ ಮಾಡಿಸಿದಾಗ ರಿಪೋರ್ಟ್ ಪಾಸಿಟಿವ್ ಇರುವುದಾಗಿ ತಿಳಿದು ಬಂದಿತು.
ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ಉಮಾಕಾಂತ, ತಾಲೂಕು ವೈದ್ಯಾಧಿಕಾರಿ ಮೇಕನ್, ಡಿವೈಎಸ್‍ಪಿ ವೆಂಕನಗೌಡ ಪಾಟೀಲ, ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ತಮ್ಮ ಸಿಬ್ಬಂದಿಯೊಂದಿಗೆ ಆಗಮಿಸಿ ಮನೆಯ ಇತರ ಸದಸ್ಯರನ್ನು ವಿಚಾರಣೆ ನಡೆಸಿ ಸುತ್ತಲೂ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಕೊರೊನಾ ಪೀಡಿತ ರೋಗಿಗಳಿಗೆ ಪ್ರಸ್ತುತ ಇ.ಎಸ್.ಐ.ಸಿ. ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.



