Connect with us

Dvg Suddi-Kannada News

ಕಲಬುರಗಿಯಲ್ಲಿ ಎರಡು ವರ್ಷದ ಮಗುವಿಗೆ ಕೊರೊನಾ ಪಾಸಿಟಿವ್ ಪತ್ತೆ

ಪ್ರಮುಖ ಸುದ್ದಿ

ಕಲಬುರಗಿಯಲ್ಲಿ ಎರಡು ವರ್ಷದ ಮಗುವಿಗೆ ಕೊರೊನಾ ಪಾಸಿಟಿವ್ ಪತ್ತೆ

ಡಿವಿಜಿ ಸುದ್ದಿ, ಕಲಬುರಗಿ: ಕೊರೊನಾ ಸೋಂಕಿತ ವ್ಯಕ್ತಿಗಳ ಜೊತೆಗೆ ಸಂಪರ್ಕ ಹೊಂದಿರದ ಎರಡು ವರ್ಷದ ಹೆಣ್ಣು ಮಗುವಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮಗಳಿಗೆ ಕೊರೊನಾ ಸೋಂಕು ಹರಡಿದೆ ಎಂದು ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ಟೀಟ್ ನಲ್ಲಿ ತಿಳಿಸಿದ್ದಾರೆ.

ಆ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚಿಸಿದ್ದಾರೆ.ಶನಿವಾರ ಸಂಜೆ ಮನೆ ಮುಂದೆ ಆಟವಾಡಿಕೊಂಡಿದ್ದಾಗ ಗಾಯ ಮಾಡಿಕೊಂಡಿದ್ದಳು.  ಬಳಿಕ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಕೊರೊನಾ ಟೆಸ್ಟ್ ಮಾಡಿಸಿದಾಗ ರಿಪೋರ್ಟ್ ಪಾಸಿಟಿವ್ ಇರುವುದಾಗಿ ತಿಳಿದು ಬಂದಿತು.

ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ಉಮಾಕಾಂತ, ತಾಲೂಕು ವೈದ್ಯಾಧಿಕಾರಿ ಮೇಕನ್, ಡಿವೈಎಸ್‍ಪಿ ವೆಂಕನಗೌಡ ಪಾಟೀಲ, ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ತಮ್ಮ ಸಿಬ್ಬಂದಿಯೊಂದಿಗೆ ಆಗಮಿಸಿ ಮನೆಯ ಇತರ ಸದಸ್ಯರನ್ನು ವಿಚಾರಣೆ ನಡೆಸಿ ಸುತ್ತಲೂ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಕೊರೊನಾ ಪೀಡಿತ ರೋಗಿಗಳಿಗೆ ಪ್ರಸ್ತುತ ಇ.ಎಸ್.ಐ.ಸಿ. ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top