Connect with us

Dvgsuddi Kannada | online news portal | Kannada news online

ಕೊರೊನಾ ಸಂಕಷ್ಟಕ್ಕೆ ಮಿಡಿದ ಸರ್ಕಾರ: 1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಕೊರೊನಾ ಸಂಕಷ್ಟಕ್ಕೆ ಮಿಡಿದ ಸರ್ಕಾರ: 1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿವರಿಗೆ  ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ 1,610 ಕೋಟಿಯ ವಿಶೇಷ ಪ್ಯಾಕೇಜ್ ಘೋಷಿಸಿದೆ.

ಕೊರೊನಾ ವೈರಸ್ ಲಾಕ್‍ಡೌನ್ ನಿಂದಾಗಿ ಸಭೆ ಸಮಾರಂಭ, ಮದುವೆ ನಡೆಸಿರುವುದರಿಂದ ಹೂವು ಬೆಳೆದವರು ನಷ್ಟ ಅನುಭವಿಸಿದ್ದಾರೆ. ಇವರಿಗಾಗಿ 11,687 ಹೆಕ್ಟೆರ್ ವಿಸ್ತೀರ್ಣದಲ್ಲಿ ಬೆಳೆದ ಹೂ ಮಾರಾಟ ಆಗದೆ ರೈತರಿಗೆ ನಷ್ಟವಾಗಿದೆ. ಹಾಗಾಗಿ ಹೂ ಬೆಳೆಗಾರರಿಗೆ ಒಂದು ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ನೀಡಲಾಗುತ್ತದೆ.

yeddiyurapp pc

ಒಂದು ತಿಂಗಳಿನಿಂದ ಕೆಲಸವಿಲ್ಲದೇ ಕುಳಿತಿರುವ ಕ್ಷೌರಿಕ, ಆಟೋ, ಟ್ಯಾಕ್ಸಿ ಚಾಲಕರು, ಮಡಿವಾಳರಿಗೆ ತಲಾ 5 ಸಾವಿರ ರೂಪಾಯಿ  ಪರಿಹಾರ ಸರ್ಕಾರ ಘೋಷಣೆ ಮಾಡಿದೆ. ಅಂದಾಜು 60,000 ಮಡಿವಾಳರು, 2,30,000 ಕ್ಷೌರಿಕರು, ಆಟೋ ಹಾಗೂ ಟ್ಯಾಕ್ಸಿ ಚಾಲಕರು ಒಟ್ಟು 7,75000 ಈ ವಿಶೇಷ ಪ್ಯಾಕೇಜ್ ಫಲಾನುಭವಿಗಳಾಗಿದ್ದಾರೆ.

flower

ಸಣ್ಣ ಹಾಗೂ ಮಧ್ಯಮ ವರ್ಗದ ಕೈಗಾರಿಕೆ ಹಾಗೂ ಉದ್ಯಮಗಳ ವಿದ್ಯುತ್ ಬಿಲ್ ನ  ಮಿನಿಮಮ್ ಶುಲ್ಕದ 2 ತಿಂಗಳ ಬಿಲ್ ಮನ್ನಾ ಮಾಡಲಾಗಿದೆ. ಬೃಹತ್ ಕೈಗಾರಿಕೆಗಳ ವಿದ್ಯುತ್ ಬಿಲ್ ಪಾವತಿ ಬಡ್ಡಿ ರಹಿತವಾಗಿ 2 ತಿಂಗಳಿಗೆ ಮುಂದೂಡಲಾಗಿದೆ. ನೇಕಾರರಿಗೆ 109 ಕೋಟಿ ಸಾಲಮನ್ನ ಘೋಷಿಸಲಾಗಿದೆ. ಮೊದಲು 29 ಕೋಟಿ ಮನ್ನ ಮಾಡಲಾಗಿತ್ತು ಉಳಿದ ಹಣವನ್ನ ಸರ್ಕಾರ ಕೂಡಲೇ ಬಿಡುಗಡೆ ಮಾಡಲಿದೆ.

atuo

1 ಲಕ್ಷದ ಒಳಗಿನ ಸಾಲ ಕಟ್ಟಿದ ನೇಕಾರರಿಗೆ ಕಟ್ಟಿದ ಹಣವನ್ನ ವಾಪಸ್ ಕೊಡಲು ಸರ್ಕಾರ ತೀರ್ಮಾನಿಸಿದೆ. ನೇಕಾರ್ ಸಮ್ಮಾನ್ ಯೋಜನೆ ಅಡಿಯಲ್ಲಿ 54 ಸಾವಿರ ಕೈ ಮಗ್ಗ ನೇಕಾರರಿಗೆ ವರ್ಷಕ್ಕೆ 2 ಸಾವಿರ ಹಣ ಅವರ ಖಾತೆಗೆ ಹಾಕಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top