ಡಿವಿಜಿಸುದ್ದಿ, ಬೆಂಗಳೂರು : ಜುಲೈ 30, 31 ಸಿಇಟಿ ಪರೀಕ್ಷೆ ನಡೆಯಲಿದ್ದು, ಅಲ್ಲಿಯವರೆಗೂ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ಲಾಕ್‍ಡೌನ್‍ನಿಂದಾಗಿ ಸಿಇಟಿ, ನೀಟ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕ್ರ್ಯಾಶ್ ಕೋರ್ಸ್ ತರಗತಿ ಆರಂಭಿಸಲಾಗಿದೆ. ಗೆಟ್ ಸಿಇಟಿ ಗೊ ಹೆಸರಿನಲ್ಲಿ ಕ್ರ್ಯಾಶ್ ಕೋರ್ಸ್ ನಡೆಸಲಾಗುತ್ತಿದ್ದು, ಪರೀಕ್ಷೆ ನಡೆಯುವವರೆಗೂ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಕರು ಆನ್‍ಲೈನ್‍ನಲ್ಲಿ ಕ್ಲಾಸ್ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಈಗಾಗಲೇ ಕೋರ್ಸ್ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 1,60,510 ಜನರು ಈ ಪೇಜ್ ನೋಡಿದ್ದಾರೆ. 76,913 ವಿದ್ಯಾರ್ಥಿಗಳು ಲಾಗಿನ್ ಆಗಿದ್ದಾರೆ. ಈ ಪೈಕಿ 38 ಸಾವಿರ ವಿದ್ಯಾರ್ಥಿಗಳು ಆಪ್ ಮೂಲಕ ಲಾಗಿನ್ ಆಗಿದರೆ, 38 ಸಾವಿರ ವಿದ್ಯಾರ್ಥಿಗಳು ವೆಬ್ ಪೋರ್ಟಲ್ ಮೂಲಕ ಲಾಗಿನ್ ಆಗಿದ್ದಾರೆ. 51,975 ವಿದ್ಯಾರ್ಥಿಗಳು ಈಗಾಗಲೇ ಟೆಸ್ಟ್ ತೆಗೆದುಕೊಂಡಿದ್ದಾರೆ ಎಂದರು.



