ಡಿವಿಜಿ ಸುದ್ದಿ, ಬೆಂಗಳೂರು: ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದರು.
ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳ ಜತೆ ಸರ್ಕಾರ ಮಾತುಕತೆ ನಡೆಸಿದೆ. ಅರ್ಧದಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರು. 2,734 ಹಾಸಿಗೆ ನೀಡುವುದಾಗಿ ಖಾಸಗಿ ಆಸ್ಪತ್ರೆ ಅವರು ಮಾತುಕೊಟ್ಟಿದ್ದರು. ಈವರೆಗೆ ನೀಡಿರುವುದು ಕೇವಲ 116 ಮಾತ್ರ ಎಂದರು.
ಸರ್ಕಾರಕ್ಕೆ ನೀಡಬೇಕಿರುವ ಹಾಸಿಗೆಗಳನ್ನು ಅವರು ಆದಷ್ಟು ಬೇಗ ಹಸ್ತಾಂತರಿಸಬೇಕು. ಇದರ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿಯೇ ಮುಖ್ಯಮಂತ್ರಿಯವರು ಕಂದಾಯ ಸಚಿವ ಆರ್. ಅಶೋಕ್ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ಅವರನ್ನು ನೇಮಕ ಮಾಡಿದ್ದಾರೆ. ಸೋಮವಾರದಿಂದ ಪರಿಶೀಲನೆ ನಡೆಯಲಿದೆ ಎಂದರು.
ಯಾವುದೇ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿ ಹಿಂದಕ್ಕೆ ಕಳುಹಿಸುವಂತಿಲ್ಲ. ಇದನ್ನು ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಇಷ್ಟರ ಮೇಲೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಅಂಥ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ. ಇದು ಆರೋಗ್ಯ ತುತು೯ ಪರಿಸ್ಥಿತಿ ಸಂದರ್ಭ ಆಗಿರುವುದರಿಂದ ಈ ವಿಷಯದಲ್ಲಿ ರಾಜಿ ಇಲ್ಲ ಎಂದರು.
ಕಳೆದು ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿ ಗೊಂದಲ ಆಗಿರುವುದು ನಿಜ. ಅದನ್ನು ಸರಿಪಡಿಸಲಾಗುತ್ತಿದೆ. ಮುಖ್ಯಮಂತ್ರಿಯವರು ಅದಕ್ಕಾಗಿ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಸೋಮವಾರದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ. ಒಂದು ವೇಳೆ ಎಲ್ಲಿಯಾದರೂ ಚಿಕಿತ್ಸೆಯಲ್ಲಿ, ದಾಖಲು ಮಾಡಿಕೊಳ್ಳುವಲ್ಲಿ, ತಪಾಸಣಾ ವರದಿಗಳಿಗೆ ಸಂಬಂಧಿಸಿದ ದೂರು ಇದ್ದಲ್ಲಿ, ಚಿಕಿತ್ಸೆ ನಿರಾಕರಿಸಿದರೆ 1912 ನಂಬರಿಗೆ ಕರೆ ಮಾಡಿದರೆ ತಕ್ಷಣ ಸ್ಪಂದಿಸಲಾಗುತ್ತದೆ. ಇದಕ್ಕಾಗಿಯೇ ದಿನದ 24 ತಾಸು ಕಾರ್ಯ ನಿವ೯ಹಿಸುವ ಕಾಲ್ ಸೆಂಟರ್ ಆರಂಭಿಸಲಾಗಿದೆ. ಆರಂಭದಲ್ಲಿ ಒಂದೆರಡು ದಿನ ಸಣ್ಣಪುಟ್ಟ ಸಮಸ್ಯೆ ಬರಬಹುದು, ಕ್ರಮೇಣ ಎಲ್ಲವೂ ಸರಿಯಾಗಲಿದೆ’ ಎಂದರು.
ಕಕೆಲವು ಕಡೆ ಕೋವಿಡ್ ಪರೀಕ್ಷೆಗೆ 4000 ಅಥವಾ 4,500 ತೆಗೆದುಕೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ್ದೇನೆ. ಸರ್ಕಾರ ಇದುವರೆಗೆಆರು ಲಕ್ಷಕ್ಕೂ ಹೆಚ್ಚು ಮಂದಿಗೆ ತಪಾಸಣೆ ಮಾಡಲಾಗಿದೆ. ನಯಾ ಪೈಸೆ ತೆಗೆದುಕೊಂಡಿಲ್ಲ. ಸರ್ಕಾರದ ವತಿಯಿಂದ ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಲಾಗಿದೆ, ನಮ್ಮಿಂದ ಕಳುಹಿಸದ ರೋಗಿಗಳಿಗೆ 2,200 ದರ ಪಡೆಯಬೇಕು ಎಂದು ನಿಗದಿಪಡಿಸಲಾಗಿದೆ.ಒಂದು ವೇಳೆ ಹೆಚ್ಚು ದರ ಪಡೆದರೆ ಕ್ರಮ ಜರುಗಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲವು ಲ್ಯಾಬ್‌ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ 24 ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸಲುವಾಗಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟೆಸ್ಟ್‌ಗಳ ಸಂಖ್ಯೆಯನ್ನು ದಿನವೊಂದಕ್ಕೆ 30 ಸಾವಿರಕ್ಕೆ ಹೆಚ್ಚಿಸುವ ಹಾಕಿಕೊಳ್ಳಲಾಗಿದೆ.
ನಮ್ಮಲ್ಲಿ ಕೋವಿಡ್ ಕೇರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 819 ಹಾಸಿಗೆಗಳ ಪೈಕಿ 152 ಖಾಲಿಯಿವೆ, ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 1899 ಹಾಸಿಗೆ ಪೈಕಿ 779 ಲಭ್ಯವಿವೆ, ಸರ್ಕಾರಿ ಆಸ್ಪತ್ರೆಗಳಲ್ಲಿ 611ಇನ್ನೂ 105 ಖಾಲಿಯಿವೆ ಮತ್ತು ಖಾಸಗಿ ಆಸ್ಪತ್ರೆಗಳ ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ನಮಗೆ 2,734 ಹಾಸಿಗೆ ನೀಡಬೇಕಿದ್ದು ಇದುವರೆಗೆ 116 ಮಾತ್ರ ನೀಡಿದ್ದಾರೆ. ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ನಿವಾರಣೆ ಆಗಿ ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಜನರು ಗೊಂದಲಕ್ಕೆ ಒಳಗಾಗುವ, ಆತಂಕಪಡುವ ಅಗತ್ಯವಿಲ್ಲ ಎಂದರು.