ನವದೆಹಲಿ: ಲಾಕ್ ಡೌನ್ ಹಾಗೂ ಕೊರೊನಾ ವೈರಸ್ ಕುರಿತು ದಾಜ್ಯಗಳ ಸ್ಥಿತಿಗತಿ ತಿಳಿಯಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಾಳೆ (ಸೋಮವಾರ) ಮಧ್ಯಾಹ್ನ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಕೊರೊನಾ ವೈರಸ್‍ನಿಂದಾಗಿ ಹೇರಿದ್ದ ಲಾಕ್‍ಡೌನ್ ಕುರಿತು ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಪ್ರಧಾನಿ ಸಭೆಯಲ್ಲಿ ಚರ್ಚಿಸಲಿದ್ದಾರೆ. ಮೇ 17ರಂದು ಮೂರನೇ ಹಂತದ ಲಾಕ್‍ಡೌನ್ ಮುಕ್ತಾಯವಾಗಲಿದೆ. ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಧ್ಯತೆ ಇದೆ.
ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಹೋಗಲು ನೀಡಿದ ಅವಕಾಶದಿಂದ ಗ್ರೀನ್ ಝೋನ್ ಪ್ರದೇಶಗಳು ಕೂಡ ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿವೆ ಎಂಬುದು ಅನೇಕ ರಾಜ್ಯಗಳ ಆರೋಪವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಮೀಷನರ್ ಜೊತೆಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ.



