ಡಿವಿಜಿ ಸುದ್ದಿ, ಬೆಂಗಳೂರು: ಇಡೀ ದೇಶ 21 ದಿನ ಲಾಕ್ಡೌನ್ ಆಗಿದೆ. ಆದರೆ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಾತ್ರ ದಿನೇ ದಿನೇ ಹೆಚ್ಚುತ್ತಲೇ ಸಾಗಿದೆ. ಇಂದು ಒಂದೇ ದಿನ 10 ಮಂದಿಗೆ ಕೊರೊನಾ ಸೋಂಕು ಕಂಡುಬಂದಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಆಗಿದೆ.
ಮೈಸೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ಪತ್ತೆಯಾಗಿದೆ. ಹೀಗಾಗಿ ಮೈಸೂರು ಜಿಲ್ಲೆಯಲ್ಲಿಯೇ 14 ಮಂದಿ ಕೊರೊನಾ ಪಾಸಿಟಿವ್ ಬಂದಿದೆ. ಬಳ್ಳಾರಿಯಲ್ಲಿ ಮೂವರಿಗೆ, ಬೆಂಗಳೂರಿನಲ್ಲಿ ಇಬ್ಬರಿಗೆ, ಗೌರಿಬಿದನೂರಿನಲ್ಲಿ ಒಬ್ಬರಿಗೆ ಮತ್ತು ಭಟ್ಕಳದಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಟ್ಟು ಇವತ್ತು ಒಂದೇ ದಿನ ಹತ್ತು ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.