ಡಿವಿಜಿ ಸುದ್ದಿ, ಶಿವಮೊಗ್ಗ: ಕಳೆದ ಒಂದುವರೆ ತಿಂಗಳಿಂದ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲದೆ ಸೇಫ್ ಝೋನ್ ನಲ್ಲಿದ್ದ ಶಿವಮೊಗ್ಗಕ್ಕೆ ಇಂದು ಬರೊಬ್ಬರಿ 8 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಇರಲಿಲ್ಲ. ಆದರೆ, ಕೇಂದ್ರ ಸರ್ಕಾರ ನಿಮ್ಮ ಹೊರ ರಾಜ್ಯದಲ್ಲಿ ಇರುವವರನ್ನು ತಮ್ಮ ಜಿಲ್ಲೆಗೆ ಹೋಗಲು ನೀಡಿದ್ದರಿಂದ ಜಿಲ್ಲೆಗೆ 9 ತಬ್ಲಿಘಿಗಳು ಜಿಲ್ಲೆಗೆ ಬಂದಿದ್ದರು. ಅದರಲ್ಲಿ ಇದೀಗ 8 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಲ್ಲಿವರೆಗೆ ಒಂದೇ ಒಂದು ಕೇಸ್ ಪತ್ತೆಯಾಗಿರಲಿಲ್ಲ. ಆದ್ರೆ ಈಗ ಬರೊಬ್ಬರಿ 8
ಪತ್ತೆಯಾಗುವ ಮೂಲಕ ಆತಂಕ ಮೂಡಿಸಿದೆ.



