ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಸಂಕಷ್ಟಕ್ಕೆ ಒಳಗಾದವರಿಗಾಗಿ 1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಧನ್ಯವಾದ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಣ್ಣ ಸಣ್ಣ ಸಮುದಾಯಗಳನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ವಿಶೇಷ ಪ್ಯಾಕೇಜ್ ಘೋಷಿಸಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರಿಗೆ ವಿಶೇಷವಾಗಿ ಧನ್ಯವಾದಗಳು . ಹೂ ಬೆಳೆಗಾರರು, ನೇಕಾರರು, ಆಟೋ ಚಾಲಕರು, ಮಡಿವಾಳರು, ಕ್ಷೌರಿಕರಿಗೆ ಈ ವಿಶೇಷ ಪ್ಯಾಕೇಜ್ ನಿಂದ ಅನುಕೂಲವಾಗಲಿದೆ ಎಂದರು.
ವಿಶೇಷ ಅಧಿವೇಶನಕ್ಕೆ ಆಗ್ರಹ
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನಾ ಸಂಕಷ್ಟ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು. ರಾಜ್ಯದಲ್ಲಿ ಹಲವರು ಸಮುದಾಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕಾಗಿ ವಿಶೇಷ ಅಧಿವೇಶನ ಕರೆಯುವ ಅವಶ್ಯಕತೆ ಇದೆ ಎಂದಿದ್ದಾರೆ.



