ಡಿವಿಜಿ ಸುದ್ದಿ, ಬೆಂಗಳೂರು: ಕಳೆದ ಒಂದುವರೆ ತಿಂಗಳಿಂದ ಲಾಕ್ ಡೌನ್ ನಿಂದ sslc ಪರೀಕ್ಷೆ ನಡೆಸಲಾಗದೆ ಮುಂದೂಡಲಾಗಿತ್ತು. ಇದೀಗ sslc ಪರೀಕ್ಷೆ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆ ಯಾವ ರೀತಿ ಪರೀಕ್ಷೆ ನಡೆಸಬೇಕು. ಪರೀಕ್ಷೆ ನಡೆಸಲು ತಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಈಸಭೆಯಲ್ಲಿ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದೇವೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಾಮಾಜಿಕ ಅಂತರ, ಮಾಸ್ಕ್ , ಸ್ಯಾನಿಟೈಸರ್ ಬಳಕೆ ಹೀಗೆ ಎಲ್ಲಾ ರೀತಿಯಲ್ಲಿಯೂ ಪೂರ್ವ ತಯಾರಿ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ ನಾಳೆ ಸಭೆಯಲ್ಲಿ ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಿ ನಂತರ sslc ಪರೀಕ್ಷೆ ವೇಳಾಪಟ್ಟಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.



