ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ವೈರಸ್ ಏಪ್ರಿಲ್ ನಿನ್ನೆ ಸಂಜೆ 5ರಿಂದ ಇಂದು ಮಧ್ಯಾಹ್ನ 12ರ ವರೆಗಿನ ವರದಿಯಲ್ಲಿ ರಾಜ್ಯದ18 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೊನಾ ವೈರಸ್ ಸೋಂಕು ಪ್ರಕರಣಗಳು 463 ತಲುಪಿದ್ದು, ಸೋಂಕಿನಿಂದ 18 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಪ್ರಕರಣಗಳ ಪೈಕಿ 150 ಜನ ಗುಣಮುಖರಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಒಟ್ಟು 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಉಸಿರಾಟ ತೊಂದರೆ ಇರುವ ಒಬ್ಬರಿಗೆ ಕೊರೊನಾ ಪತ್ತೆಯಾಗಿದ್ದು ,ಹೊಂಗಸಂದ್ರದಲ್ಲಿ 5, ಪಾದರಾಯನಪುರದ 5 ಜನರಿಗೆ ಸೋಂಕು ಪತ್ತೆಯಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಬೆಳಗಾವಿಯಲ್ಲಿ ತಲಾ ಒಬ್ಬರಿಗೆ, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ತಲಾ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.