ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಒಂದೇ ದಿನ 239 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,452ಕ್ಕೆ ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಕಲಬುರಗಿ 39, ಯಾದಗಿರಿ 39, ಬೆಳಗಾವಿ 38, ಬೆಂಗಳೂರು ನಗರ 24, ದಕ್ಷಿಣ ಕನ್ನಡ 17, ದಾವಣಗೆರೆ 17, ಉಡುಪಿ 13, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ 2, ಉತ್ತರ ಕನ್ನಡ 2, ಮಂಡ್ಯ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಬೆಂಗಳೂರಿನ ನಿವಾಸಿ 61 ವರ್ಷದ ವೃದ್ಧೆ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ವೃದ್ಧೆಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಮಧುಮೇಹ, ರಕ್ತದೊತ್ತಡ, ಹೈಫೋ ಥೈರಾಡಿಸಮ್‍ನಿಂದ ಬಳಲುತ್ತುದ್ದ ಅವರು ಮೇ 29ರಂದು ಬೆಂಗಳೂರಿನ ಕೋವಿಡ್-13 ಆಸ್ಪತ್ರೆಗೆ ದಾಖಲಾಗಿದ್ದರು.
ಬೆಂಗಳೂರಿನ ನಿವಾಸಿ 57 ವರ್ಷದ ಪುರುಷ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಧುಮೇಹ, ರಕ್ತದೊತ್ತಡ, ಆನೆ ಕಾಲು ಮತ್ತು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಜೂನ್ 03ರಂದು ಬೆಂಗಳೂರಿನ ಕೋವಿಡ್-13 ಆಸ್ಪತ್ರೆಗೆ ದಾಖಲಾಗಿದ್ದರು.
ಇಂದು ಒಟ್ಟು 143 ಜನರು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದರೊಂದಿಗೆ ಗುಣಮುಖರಾಗಿರುವವರ ಸಂಖ್ಯೆ 2,132ಕ್ಕೇರಿದೆ. ರಾಜ್ಯದಲ್ಲಿ ಸದ್ಯ 3,257 ಪ್ರಕರಣಗಳು ಸಕ್ರಿಯಾಗಿವೆ.