ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರೆಸ್ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ 240 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,337ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 198 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8564 ಏರಿಕೆಯಾಗಿದೆ. ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 218 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇನ್ನು 2,855 ಸಕ್ರಿಯ ಪ್ರಕರಣಗಳಿವೆ.
ಇಂದು ಪತ್ತೆ ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ 88, ಹರಿಹರ 41, ಜಗಳೂರು 15, ಚನ್ನಗಿರಿ 45, ಹೊನ್ನಾಳಿ 43, ಹೊರ ಜಿಲ್ಲೆಯಿಂದ ಬಂದ 08 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಶಾಮನೂರು ರಸ್ತೆಯ 40 ವರ್ಷದ ಪುರುಷ ಹಾಗೂ ವಿನೋಬ ನಗರದ 46 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.



