Connect with us

Dvgsuddi Kannada | online news portal | Kannada news online

ದಾವಣಗೆರೆ: 240 ಕೊರೊನಾ ಪಾಸಿಟಿವ್; 198 ಡಿಸ್ಚಾರ್ಜ್ , 2 ಸಾವು

ದಾವಣಗೆರೆ

ದಾವಣಗೆರೆ: 240 ಕೊರೊನಾ ಪಾಸಿಟಿವ್; 198 ಡಿಸ್ಚಾರ್ಜ್ , 2 ಸಾವು

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರೆಸ್ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ 240 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,337ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 198 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8564 ಏರಿಕೆಯಾಗಿದೆ. ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 218 ಮಂದಿ ಮೃತಪಟ್ಟಿದ್ದಾರೆ.  ಜಿಲ್ಲೆಯಲ್ಲಿ ಇನ್ನು 2,855 ಸಕ್ರಿಯ ಪ್ರಕರಣಗಳಿವೆ.

ಇಂದು ಪತ್ತೆ ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ 88, ಹರಿಹರ 41, ಜಗಳೂರು 15, ಚನ್ನಗಿರಿ 45, ಹೊನ್ನಾಳಿ 43, ಹೊರ ಜಿಲ್ಲೆಯಿಂದ ಬಂದ 08 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಶಾಮನೂರು ರಸ್ತೆಯ 40 ವರ್ಷದ ಪುರುಷ ಹಾಗೂ ವಿನೋಬ ನಗರದ 46 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top