ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ 1,90,000 ದಾಟಿದ್ದು, ಭಾರತ ಜಗತ್ತಿನಲ್ಲಿಯೇ 7 ನೇ ಸ್ಥಾನ ಪಡೆದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಫ್ರಾನ್ಸ್ ಅನ್ನು ಹಿಂದಿಕ್ಕಿರುವ ಭಾರತವು ಜಗತ್ತಿನಲ್ಲಿ ಏಳನೇ ಸ್ಥಾನ ಪಡೆದಿದೆ. ಕಳೆದ 24 ಗಂಟೆಗಳಲ್ಲಿ 8,392 ಹೊಸ ಪ್ರಕರಣಗಳು ದಾಖಲಾಗಿದ್ದು, ಅಮೆರಿಕ, ಬ್ರೆಜಿಲ್, ರಷ್ಯಾ, ಬ್ರಿಟನ್, ಸ್ಪೇನ್ ಮತ್ತು ಇಟಲಿ ದೇಶಗಳ ನಂತರದ ಸ್ಥಾನದಲ್ಲಿ ಭಾರತವಿದೆ.
ಲಾಕ್‌ಡೌನ್ ತೆರವುಗೊಳಿಸಿದ ನಂತರ ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣ ಹೆಚ್ಚಾಗಿದೆ. ಭಾರತದಲ್ಲಿ ಕೊರೊನಾ ಸೋಂಕಿನಿಂದ 5394 ಮಂದಿ ಮೃತಪಟ್ಟಿದ್ದಾರೆ. ಯುರೋಪ್ ಮತ್ತು ಅಮೆರಿಕ ದೇಶಗಳಿಗೆ ಹೋಲಿಸಿದರೆ ಸಾವಿನ ಸಂಖ್ಯೆ ಕಡಿಮೆ.



