ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿತ ಪ್ರಮಾಣ ಹೆಚ್ಚಳ ಹಿನ್ನೆಲೆ ಜನರು ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ಹೊರಟಿದ್ದಾರೆ. ಈ ಬಗ್ಗೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದು, ಯಾರು ಕೂಡ ಬೆಂಗಳೂರು ಬಿಟ್ಟು ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಹೊಸದಾಗಿ 480 ಅಂಬುಲೆನ್ಸ್ ಖರೀದಿ ಮಾಡಲಾಗಿದ್ದು, ಚಿಕಿತ್ಸೆಗೆ ಎಲ್ಲಾ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಯಾರು ಕೂಡ ಭಯಗೊಂಡು ಬೆಂಗಳೂರು ತೊರೆಯಬೇಡಿ. ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದರು.
ಈ ಪಿಡುಗು ಜಗತ್ತಿನಲ್ಲಿ ಹರಡಿದೆ. ಇದರ ಜೊತೆಗೆ ಬದುಕಬೇಕಿದೆ. ಇದನ್ನೇ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಬದುಕು ಸಾಗಿಸಬೇಕಿದೆ ಎಂದು ತಿಳಿಸಿದರು.



